alex Certify ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆಗೆ ಸತೀಶ್ ಜಾರಕಿಹೊಳಿ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆಗೆ ಸತೀಶ್ ಜಾರಕಿಹೊಳಿ ತಿರುಗೇಟು

ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಭಾರತೀಯ ಸಂಸ್ಕೃತಿ ವಿರೋಧಿ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಟೀಕಿಸುಸಿರುವುದಕ್ಕೆ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.

ಅರುಣ್ ಸಿಂಗ್ ಅವರಿಗೆ ಭಾರತೀಯ ಇತಿಹಾಸ ಗೊತ್ತಿಲ್ಲ. ರಾಜ್ಯಕ್ಕೆ ಕಾಲಿಡುವ ಮೊದಲು ಅವರು ಬಸವಣ್ಣನವರ ಬಗ್ಗೆ ತಿಳಿದುಕೊಳ್ಳಬೇಕು ಎಂದು ಹೇಳಿದ್ದಾರೆ.

ಮೌಢ್ಯದ ವಿರುದ್ಧ ಹೋರಾಟ ಆರಂಭವಾಗಿದೆ. ಜನ ಮೌಢ್ಯದಿಂದ ಮೋಸ ಹೋಗಬಾರದೆಂದು ಇಂತಹ ಕಾರ್ಯಕ್ರಮಗಳನ್ನು ನಾವು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ. ಯಾವುದೇ ಧರ್ಮ, ಜಾತಿ ವಿರುದ್ಧದ ಕಾರ್ಯಕ್ರಮ ಇದಲ್ಲ. 12 ನೇ ಶತಮಾನದಲ್ಲಿ ಬಸವಾದಿ ಶರಣರು ಮೌಢ್ಯದ ವಿರುದ್ಧ ಧ್ವನಿಯೆತ್ತಿದ್ದರು ಎಂದು ಹೇಳಿದ್ದಾರೆ.

ಸತೀಶ್ ಜಾರಕಿಹೊಳಿ ಗೆದ್ದರೆ ಬೆಳಗಾವಿಯಲ್ಲಿ ಭಯೋತ್ಪಾದನೆ ಆರಂಭವಾಗುತ್ತದೆ. ಕೋಮು ಗಲಭೆ ನಡೆಯುತ್ತದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಕ್ಕೆ ತಿರುಗೇಟು ನೀಡಿದ ಸತೀಶ್ ಜಾರಕಿಹೊಳಿ, ಕೋಮುಗಲಭೆ ಮಾಡುವರು ಬಿಜೆಪಿಯವರು. ಜನರಿಗೆ ಯಾರಿಗೆ ಮತ ಹಾಕಬೇಕೆನ್ನುವುದು ಗೊತ್ತಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...