alex Certify ಚುನಾವಣೋತ್ತರ ಸಮೀಕ್ಷೆ ಸಂಭ್ರಮದಲ್ಲಿರುವ ಬಿಜೆಪಿಗೆ ಮತ್ತೊಂದು ಸಿಹಿ ಸುದ್ದಿ: ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಜಯಭೇರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೋತ್ತರ ಸಮೀಕ್ಷೆ ಸಂಭ್ರಮದಲ್ಲಿರುವ ಬಿಜೆಪಿಗೆ ಮತ್ತೊಂದು ಸಿಹಿ ಸುದ್ದಿ: ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಜಯಭೇರಿ

ಇಟಾನಗರ: ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದೆ. 60 ಕ್ಷೇತ್ರಗಳನ್ನು ಒಳಗೊಂಡಿರುವ ಅರುಣಾಚಲ ಪ್ರದೇಶ ವಿಧಾನಸಭೆಯ 50 ಸ್ಥಾನಗಳಿಗೆ ಮತದಾನ ನಡೆದಿತ್ತು. 10 ಸ್ಥಾನಗಳಲ್ಲಿ ಆಡಳಿತಾರೂಢ ಬಿಜೆಪಿ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದರು.

ಇಂದು ಮತ ಎಣಿಕೆ ನಡೆದು ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 46 ಸ್ಥಾನಗಳನ್ನು ಗಳಿಸಿದೆ. NPEP 5, ಪಿಪಿಎ 2, NCP 2,ಕಾಂಗ್ರೆಸ್ 1 ಸ್ಥಾನ ಗಳಿಸಿದೆ. ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆ ಮತ್ತು ಲೋಕಸಭಾ ಚುನಾವಣೆ ಮತದಾನ ಏಪ್ರಿಲ್ 19 ರಂದು ಏಕಕಾಲದಲ್ಲಿ ನಡೆದಿತ್ತು. ಇಂದು ಬೆಳಿಗ್ಗೆಯಿಂದ 24 ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು, ಫಲಿತಾಂಶ ಪ್ರಕಟವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...