alex Certify ಕೋವಿಡ್ ಲಸಿಕೆ ಹಾಕಲು ಅಪಾಯ ಲೆಕ್ಕಿಸದೆ ನದಿ ದಾಟಿದ ಆರೋಗ್ಯ ಕಾರ್ಯಕರ್ತರು: ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋವಿಡ್ ಲಸಿಕೆ ಹಾಕಲು ಅಪಾಯ ಲೆಕ್ಕಿಸದೆ ನದಿ ದಾಟಿದ ಆರೋಗ್ಯ ಕಾರ್ಯಕರ್ತರು: ವಿಡಿಯೋ ವೈರಲ್

ಇಟಾನಗರ: ಕೊರೋನಾ ವೈರಸ್ ವಿರುದ್ಧ ಜನರಿಗೆ ಲಸಿಕೆ ನೀಡುವ ಸಲುವಾಗಿ ಆರೋಗ್ಯ ಕಾರ್ಯಕರ್ತರು ಉಕ್ಕಿ ಹರಿಯುತ್ತಿರುವ ನದಿಗೆ ಅಡ್ಡಲಾಗಿ ನಿರ್ಮಿಸಿದ ತಾತ್ಕಾಲಿಕ ಸೇತುವೆಯನ್ನು ದಾಟಿ ಬರುತ್ತಿರುವ ವಿಡಿಯೋ ವೈರಲ್ ಆಗಿದೆ.

ಉಕ್ಕಿಹರಿಯುತ್ತಿರುವ ನದಿಗೆ ಅಡ್ಡಲಾಗಿ ಸ್ಥಳೀಯರು ತಾತ್ಕಾಲಿಕ ಸೇತುವೆ ನಿರ್ಮಿಸಿದ್ದಾರೆ. ಅರುಣಾಚಲ ಪ್ರದೇಶದ ದೂರದ ಹಳ್ಳಿಯನ್ನು ತಲುಪಲು ಮರದ ದಿಮ್ಮಿಗಳ ಸೇತುವೆ ಮೂಲಕ ಆರೋಗ್ಯ ಕಾರ್ಯಕರ್ತರು ದಾಟಿದ್ದಾರೆ. ಅವರು ಎದುರಿಸಿದ ಸವಾಲುಗಳನ್ನು ಎತ್ತಿ ತೋರಿಸುವ ನಿಟ್ಟಿನಲ್ಲಿ ಟ್ವಿಟ್ಟರ್‌ನಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಸರ್ಕಾರಿ ಸ್ವಾಮ್ಯದ ಪ್ರಸಾರ ಭಾರತಿ ಈ ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದೆ. ಕೊರೋನ ವೈರಸ್ ವಿರುದ್ಧ ಸಾವಿರಾರು ಜನರಿಗೆ ಲಸಿಕೆ ಹಾಕಲು ಗ್ರಾಮೀಣ ಆರೋಗ್ಯ ಕಾರ್ಯಕರ್ತರು ಕಾಡುಗಳು, ಹೊಳೆಗಳು ಮತ್ತು ಹದಗೆಟ್ಟ ರಸ್ತೆಗಳ ಮುಖಾಂತರ ದೂರದ ಪ್ರದೇಶಗಳನ್ನು ತಲುಪಿ ಜನರಿಗೆ ಚುಚ್ಚುಮದ್ದು ನೀಡುತ್ತಿರುವುದು ನಿಜಕ್ಕೂ ಪ್ರಶಂಸನೀಯ.

ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ದೇಶದಲ್ಲಿ ಇದುವರೆಗೆ 96.82 ಕೋಟಿಗೂ ಹೆಚ್ಚು ಕೋವಿಡ್ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...