ಬೆಂಗಳೂರು: ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ವಹಣೆಯ ಆರ್ಥಿಕ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಿದ್ದಾರೆ.
ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಸಹಾಯಕರು, ಅತಿಥಿ ಉಪನ್ಯಾಸಕರಿಗೆ ಗ್ಯಾರಂಟಿ ಕೊಡುವುದು ಬೇಡವೆಂದು ಪ್ರಸ್ತಾವನೆಯಲ್ಲಿ ತಿಳಿಸಿದ್ದು, ಇದನ್ನೆಲ್ಲ ಗಮನಿಸಿದಾಗ ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿಗಳನ್ನು ನಿಲ್ಲಿಸುತ್ತಾರೆ. ಆರ್ಥಿಕ ಇಲಾಖೆ ಬರೆದ ಪತ್ರ ತಮ್ಮ ಬಳಿ ಇದೆ ಎಂದು ಹೇಳಿದ್ದಾರೆ.
ಗ್ರಾಮೀಣಾಭಿವೃದ್ಧಿ ಇಲಾಖೆ, ಸಾರಿಗೆ ಇಲಾಖೆ, ಪರಿಶಿಷ್ಟರ ಅಭಿವೃದ್ಧಿಗೆ ಕಡಿಮೆ ಅನುದಾನ ನೀಡಲಾಗಿದೆ. ಪರಿಶಿಷ್ಟ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಅಧೀನದಲ್ಲಿರುವ ನಿಗಮಗಳಿಗೆ ಬಜೆಟ್ ನಲ್ಲಿ ಅನುದಾನ ಕಡಿತ ಮಾಡಲಾಗಿದೆ ಎಂದು ದೂರಿದ್ದಾರೆ.