ನವದೆಹಲಿ: ದೆಹಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ದೆಹಲಿಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಇಂದು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ.
ದೆಹಲಿ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ನಿಯಾಯ್ ಬಿಂದು ಅವರು ಆಪಾದಿತ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ಕುರಿತು ಆರೋಪಿಗಳು ಮತ್ತು ಜಾರಿ ನಿರ್ದೇಶನಾಲಯದ ವಾದಗಳನ್ನು ಆಲಿಸಿ ಆದೇಶ ಹೊರಡಿಸಿದ್ದಾರೆ.
1 ಲಕ್ಷ ರೂ. ಜಾಮೀನು ಬಾಂಡ್ ಮೇಲೆ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ.