ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆರೋಗ್ಯದ ಕುರಿತು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರಿಗೆ ತಿಹಾರ್ ಜೈಲಿನ ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ.
ಕೇಜ್ರಿವಾಲ್ ಇನ್ಸುಲಿನ್ ತೆಗೆದುಕೊಳ್ಳುತ್ತಿಲ್ಲ ಎಂದು ತಿಹಾರ್ ಜೈಲಿನ ಅಧಿಕಾರಿಗಳು ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕೆಲವು ತಿಂಗಳಿನಿಂದ ಕೇಜ್ರಿವಾಲ್ ಇನ್ಸುಲಿನ್ ತೆಗೆದುಕೊಳ್ಳುತ್ತಿಲ್ಲ ಎಂದು ವರದಿ ಸಲ್ಲಿಸಿದ ವಿಚಾರದ ಬಗ್ಗೆ ಆಪ್ ನಾಯಕರು ಪ್ರತಿಕ್ರಿಯೆ ನೀಡಿದ್ದು, ಆರೋಗ್ಯದ ವರದಿಯಲ್ಲಿ ಷಡ್ಯಂತ್ರವಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ವಿರುದ್ಧ ಆಪ್ ನಾಯಕರು ಗಂಭೀರ ಆರೋಪ ಮಾಡಿದ್ದು, ಕೇಜ್ರಿವಾಲ್ ಇನ್ಸುಲಿನ್ ತೆಗೆದುಕೊಳ್ಳಲು ಯಾಕೆ ಅನುಮತಿ ನೀಡುತ್ತಿಲ್ಲ. ಅವರನ್ನು ಕೊಲೆ ಮಾಡಲು ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಆಮ್ ಆದ್ಮಿ ಪಕ್ಷದ ನಾಯಕರು ಗಂಭೀರ ಆರೋಪ ಮಾಡಿದ್ದಾರೆ
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಇನ್ಸುಲಿನ್ ಮತ್ತು ವೈದ್ಯರ ಸಮಾಲೋಚನೆಯನ್ನು ನಿರಾಕರಿಸುವ ಮೂಲಕ ತಿಹಾರ್ ಜೈಲಿನೊಳಗೆ ‘ನಿಧಾನ ಮರಣ’ದತ್ತ ತಳ್ಳಲು ಸಂಚು ರೂಪಿಸಲಾಗುತ್ತಿದೆ. ಕೇಜ್ರಿವಾಲ್ ಅವರ ನಿಧಾನಗತಿಯ ಸಾವಿಗೆ ಪಿತೂರಿ ನಡೆಯುತ್ತಿದೆ ಎಂದು ಆಪ್ ವಕ್ತಾರ ಮತ್ತು ದೆಹಲಿ ಸಚಿವ ಸೌರಭ್ ಭಾರದ್ವಾಜ್ ಹೇಳಿದ್ದಾರೆ.
ದೆಹಲಿ ಮುಖ್ಯಮಂತ್ರಿ ಕಳೆದ 20-22 ವರ್ಷಗಳಿಂದ ಮಧುಮೇಹದಿಂದ ಬಳಲುತ್ತಿದ್ದಾರೆ. ಅವರ ರಕ್ತದ ಸಕ್ಕರೆಯ ಪ್ರಮಾಣವನ್ನು ಉಲ್ಲೇಖಿಸಿ ಅವರಿಗೆ ಇನ್ಸುಲಿನ್ ನಿರಾಕರಿಸಿದ ಆರೋಪದ ಮೇಲೆ ತಿಹಾರ್ ಆಡಳಿತ, ಬಿಜೆಪಿ, ಕೇಂದ್ರ ಮತ್ತು ದೆಹಲಿ ಎಲ್‌ಜಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.