ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದ ಬಗ್ಗೆ ಮೌನ ಮುರಿದ ಸಿಎಂ ಅರವಿಂದ್ ಕೇಜ್ರಿವಾಲ್: ನ್ಯಾಯಯುತ ತನಿಖೆಗೆ ಕರೆ

ನವದೆಹಲಿ: ದೆಹಲಿ ಮಹಿಳಾ ಆಯೋಗದ(ಡಿಸಿಡಬ್ಲ್ಯು) ಮಾಜಿ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ಬಗ್ಗೆ ನ್ಯಾಯಯುತ ಮತ್ತು ಸಮಗ್ರ ತನಿಖೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕರೆ ನೀಡಿದ್ದಾರೆ.

ಎಎಪಿ ಸಂಸದರ ಮೇಲಿನ ಆಪಾದಿತ ದಾಳಿಗೆ ತಮ್ಮ ಮೊದಲ ಪ್ರತಿಕ್ರಿಯೆ ನೀಡಿರುವ ಕೇಜ್ರಿವಾಲ್, ನ್ಯಾಯಯುತ ತನಿಖೆ ನಡೆಸಬೇಕು. ಮತ್ತು ನ್ಯಾಯ ಒದಗಿಸಬೇಕು ಎಂದು ತಿಳಿಸಿದ್ದಾರೆ.

ನ್ಯಾಯದ ಅಗತ್ಯವನ್ನು ಒತ್ತಿ ಹೇಳಿದ ಕೇಜ್ರಿವಾಲ್ ಘಟನೆಯು ಎರಡು ಸಂಘರ್ಷದ ಆವೃತ್ತಿಗಳನ್ನು ಹೊಂದಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದಸ್ದಾರೆ. ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣದಲ್ಲಿ ನಾನು ನ್ಯಾಯಯುತ ತನಿಖೆ ಮತ್ತು ನ್ಯಾಯವನ್ನು ಬಯಸುತ್ತೇನೆ. ಏಕೆಂದರೆ ಘಟನೆಯು ಎರಡು ಆವೃತ್ತಿಗಳನ್ನು ಹೊಂದಿದೆ. ನ್ಯಾಯವನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳಲು ಸತ್ಯವನ್ನು ಬಹಿರಂಗಪಡಿಸುವುದು ಮಹತ್ವದ್ದಾಗಿದೆ ಎಂದು ಅವರು ಹೇಳಿದ್ದಾರೆ.

ಮೇ 13 ರಂದು ಮುಖ್ಯಮಂತ್ರಿಯವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದಾಗ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸ್ವಾತಿ ಮಲಿವಾಲ್ ಆರೋಪಿಸಿದ್ದಾರೆ. ಕುಮಾರ್ ಅವರನ್ನು ಬಂಧಿಸಲಾಗಿದ್ದು, ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read