ಬೆಂಗಳೂರು: ಮಾರ್ಚ್ 4 ರಂದು ದಾವಣಗೆರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಗಮಿಸಲಿದ್ದಾರೆ. ದಾವಣಗೆರೆಯಲ್ಲಿ ಆಯೋಜಿಸಲಾಗಿರುವ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಚುರುಕು ನೀಡಲು ಆಮ್ ಆದ್ಮಿ ಪಕ್ಷದಿಂದ ಪಕ್ಷದಿಂದ ಆಯೋಜಿಸಿರುವ ಸಮಾವೇಶದಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥರಾಗಿರುವ ಅರವಿಂದ ಕೇಜ್ರಿವಾಲ್ ಭಾಗವಹಿಸಲಿದ್ದಾರೆ.