ಚಂಡೀಗಢ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪಂಜಾಬ್ ಪ್ರವಾಸ ಕೈಗೊಂಡಿದ್ದಾರೆ. ಪಂಜಾಬ್ ನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರ ಮತಗಳನ್ನು ಸೆಳೆಯಲು ಕೇಜ್ರಿವಾವಲ್ ಬಂಪರ್ ಆಫರ್ ಘೋಷಣೆ ಮಾಡಿದ್ದಾರೆ.
ಪಂಜಾಬ್ ರಾಜ್ಯದ ಎಲ್ಲಾ ಮಹಿಳೆಯರಿಗೆ ಪ್ರತಿ ತಿಂಗಳು 1000 ರೂಪಾಯಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ತಮ್ಮ ಪ್ರವಾಸದ ವೇಳೆ ಮಾತನಾಡಿದ ಅರವಿಂದ್ ಕೇಜ್ರಿವಾಲ್, ಪಂಜಾಬ್ ನಲ್ಲಿ ಆಪ್ ಅಧಿಕಾರಕ್ಕೆ ಬಂದರೆ 18 ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೆ 1000 ರೂಪಾಯಿ ನೀಡಲಾಗುತ್ತದೆ. ಮನೆಯಲ್ಲಿ ಮೂವರು ಮಹಿಳೆಯರಿದ್ದರೆ ಎಲ್ಲರಿಗೂ ತಲಾ ಒಂದು ಸಾವಿರ ರೂಪಾಯಿ ನೀಡುತ್ತೇವೆ. ಇದು ವಿಶ್ವದ ಅತಿ ದೊಡ್ಡ ಮಹಿಳಾ ಸಶಕ್ತೀಕರಣ ಯೋಜನೆಯಾಗಿದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.