ನವದೆಹಲಿ: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಡಿಸೆಂಬರ್ 21 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿದೆ.
ದೆಹಲಿ ಮುಖ್ಯಮಂತ್ರಿಗೆ ಇದು ಎರಡನೇ ಸಮನ್ಸ್ ಆಗಿದೆ. ಇದಕ್ಕೂ ಮುನ್ನ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ(ಸಿಬಿಐ) ಅವರನ್ನು ವಿಚಾರಣೆ ನಡೆಸಿತ್ತು.
ಇದಕ್ಕೂ ಮುನ್ನ ದೆಹಲಿ ಮುಖ್ಯಮಂತ್ರಿ ಜಾರಿ ನಿರ್ದೇಶನಾಲಯದ ಸಮನ್ಸ್‌ನಿಂದ ಹೊರಗುಳಿದಿದ್ದರು. ತನಿಖಾ ಸಂಸ್ಥೆಯು ನವೆಂಬರ್ 2 ರಂದು ವಿಚಾರಣೆಗೆ ಕರೆದಿತ್ತು. ಆದಾಗ್ಯೂ ದೆಹಲಿ ಸಿಎಂ ಕೇಜ್ರಿವಾಲ್ ಅವರು, ಇಡಿಗೆ ಅಸ್ಪಷ್ಟ ನೋಟಿಸ್ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರಲ್ಲದೇ, ಇದು ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದರು.