
ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧಿಸಲ್ಪಟ್ಟಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿರುವ ಸುಪ್ರೀಂ ಕೋರ್ಟ್, ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ಅವಕಾಶ ನೀಡಿದೆ. ಈ ಮೂಲಕ ಕೇಜ್ರಿವಾಲ್ ಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 21ರಂದು ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಇದೀಗ 50 ದಿನಗಳ ಬಳಿಕ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.