ಬೆಂಗಳೂರು: ಕೋವಿಡ್ ಬೆಡ್ ದುರ್ಬಳಕೆ ತಡೆಯಲು ಆಧಾರ್ ಆಧಾರಿತ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ತರಲಾಗುವುದು.
ಸಚಿವ ಅರವಿಂದ ಲಿಂಬಾವಳಿ ಈ ಬಗ್ಗೆ ಮಾಹಿತಿ ನೀಡಿ, ಕೊರೋನಾ ನಿಯಂತ್ರಣಕ್ಕೆ ಮತ್ತು ಕೊರೋನಾ ಸೋಂಕಿತರಿಗೆ ಚಿಕಿತ್ಸೆ ವ್ಯವಸ್ಥೆ ಕಲ್ಪಿಸಲು ವಾರ್ಡ್ ಮಟ್ಟದ ಸಮಿತಿ ರಚಿಸಲಾಗುವುದು. ಪ್ರತಿ ತಾಲೂಕಿನಲ್ಲಿಯೂ ಕೇರ್ ಸೆಂಟರ್ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.
ಬೆಡ್ ದುರ್ಬಳಕೆ ತಡೆಯಲು ಆಧಾರ್ ಆಧಾರಿತ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ತರಲಾಗುತ್ತದೆ. ಆಸ್ಪತ್ರೆ ಇಲ್ಲವೇ ಆರೈಕೆ ಕೇಂದ್ರಕ್ಕೆ ದಾಖಲಾತಿ ಮಾಡಿಕೊಳ್ಳಲು ಆಧಾರ್ ವ್ಯವಸ್ಥೆ ಜಾರಿಗೆ ತರಲಾಗುವುದು. ಹಾಸಿಗೆಗಳ ದುರ್ಬಳಕೆ ತಡೆಯಲು ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ತರಲಾಗುವುದು. ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್ ನಲ್ಲಿ ರೋಗಿಗಳ ಮಾಹಿತಿಯನ್ನು ನಮೂದಿಸಬೇಕು. ಇದರಿಂದ ದುರ್ಬಳಕೆ ತಡೆಯಬಹುದಾಗಿದೆ ಎಂದು ಹೇಳಲಾಗಿದೆ.