ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಅವರ ಪುತ್ರ ಆರ್ಯವೀರ್ ಸೆಹ್ವಾಗ್ ದೆಹಲಿಯ ಕಿರಿಯರ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದು, ತಂದೆಯ ಹಾದಿಯಲ್ಲೇ ತಮ್ಮ ಕೆರಿಯರ್ ರೂಪಿಸಿಕೊಳ್ಳಲು ಮುಂದಾಗಿದ್ದಾರೆ.
15 ವರ್ಷದ ಆರ್ಯವೀರ್, ವಿಜಯ್ ಮರ್ಚೆಂಟ್ ಟ್ರೋಪಿಗಾಗಿ ದೆಹಲಿಯ 16 ವಯೋಮಿತಿ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದು, ಆದರೆ ಬಿಹಾರ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಅವರಿಗೆ ಆಡುವ ಅವಕಾಶ ಲಭಿಸಿರಲಿಲ್ಲ.
ತಮ್ಮ ತಂದೆ ವೀರೇಂದ್ರ ಸೆಹ್ವಾಗ್ ಅವರಂತೆ ಬಿರುಸಿನ ಬ್ಯಾಟಿಂಗ್ ಇಷ್ಟಪಡುವ ಆರ್ಯವೀರ್, ಮುಂದಿನ ಪಂದ್ಯಗಳಲ್ಲಿ ಅವಕಾಶ ಸಿಕ್ಕರೆ ತಮ್ಮ ಸಾಮರ್ಥ್ಯ ಪ್ರದರ್ಶಿಸುವ ಇರಾದೆ ಹೊಂದಿದ್ದಾರೆ.