ಚೀನಾ ಮತ್ತು ಇತರ ದೇಶಗಳಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಹಿನ್ನೆಲೆಯಲ್ಲಿ, ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಜಿನೋಮ್ ಸೀಕ್ವೆನ್ಸಿಂಗ್ ಪ್ರಯೋಗಾಲಯಗಳಿಗೆ ಆದ್ಯತೆಯ ಆಧಾರದ ಮೇಲೆ ಸಕಾರಾತ್ಮಕ ಪ್ರಕರಣಗಳ ಮಾದರಿಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಗಳನ್ನು ಕೇಳಿದ್ದಾರೆ.
ಜಪಾನ್, ಯುನೈಟೆಡ್ ಸ್ಟೇಟ್ಸ್, ಚೀನಾ, ರಿಪಬ್ಲಿಕ್ ಆಫ್ ಕೊರಿಯಾ ಮತ್ತು ಬ್ರೆಜಿಲ್‌ನಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (ಎನ್‌ಸಿಡಿಸಿ) ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಗೆ (ಐಸಿಎಂಆರ್) ಪತ್ರ ಬರೆದಿದೆ.
ಆರೋಗ್ಯ ಸಚಿವಾಲಯ ಹೊರಡಿಸಿದ ಹೇಳಿಕೆಯಲ್ಲಿ, ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ (INSACOG) ನೆಟ್‌ವರ್ಕ್ ಮೂಲಕ ರೂಪಾಂತರಗಳನ್ನು ಪತ್ತೆಹಚ್ಚುವುದು ಅತ್ಯಗತ್ಯ ಎಂದು ಕಾರ್ಯದರ್ಶಿಗಳು ಹೇಳಿದ್ದಾರೆ. ಇವುಗಳಿಂದಾಗಿ ಹೊಸ ರೂಪಾಂತರಗಳನ್ನು ಸಮಯೋಚಿತವಾಗಿ ಪತ್ತೆಹಚ್ಚಲು ಅನುವು ಮಾಡಿಕೊಡುತ್ತದೆ ಮತ್ತು ಅದಕ್ಕಾಗಿ ಅಗತ್ಯವಾದ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ” ಎಂದಿದ್ದಾರೆ.
ಶೂನ್ಯ-ಕೋವಿಡ್ ನೀತಿಯ ಅಡಿಯಲ್ಲಿ ಚೀನಾ ಸರ್ಕಾರವು ತನ್ನ ಕಟ್ಟುನಿಟ್ಟಾದ ಲಾಕ್‌ಡೌನ್ ನಿರ್ಬಂಧಗಳನ್ನು ತೆರವುಗೊಳಿಸಿದ ನಂತರ ಚೀನಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಜನಜೀವನ ಅಸ್ತವ್ಯಸ್ಥವಾಗಿದೆ.