ಹೈದರಾಬಾದ್ : ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಒವೈಸಿ ಶನಿವಾರ ಹೈದರಾಬಾದ್ ರಾಮೇಶ್ವರಂ ಕೆಫೆಗೆ ಭೇಟಿ ನೀಡಿದರು.
ಬೆಂಗಳೂರಿನ ರಾಮೇಶ್ವರಂ ಸ್ಫೋಟವನ್ನು ಖಂಡಿಸಿದ ಅಸಾದುದ್ದೀನ್ ಒವೈಸಿ, ಸ್ಫೋಟವು ಹೇಡಿತನದ ಕೃತ್ಯ ಮತ್ತು ಭಾರತದ ಮೌಲ್ಯಗಳ ಮೇಲಿನ ದಾಳಿ ಎಂದು ಹೇಳಿದರು. ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮಸ್ಥಳವಾದ ರಾಮೇಶ್ವರಂ ಹೆಸರನ್ನು ಕೆಫೆಗೆ ಇಡಲಾಗಿದೆ ಎಂದರು. ಹೈದರಾಬಾದ್ನಲ್ಲಿ ಇತ್ತೀಚೆಗಷ್ಟೇ ಆರಂಭವಾಗಿರುವ ರಾಮೇಶ್ವರಂ ಕೆಫೆ ಹೋಟೆಲ್ಗೆ ಭೇಟಿ ನೀಡಿ ಬಂದ ನಂತರ ಒವೈಸಿ ಈ ಟ್ವೀಟ್ ಮಾಡಿದ್ದಾರೆ.
ಶನಿವಾರ, ಅಸಾದುದ್ದೀನ್ ಒವೈಸಿ ಹೈದರಾಬಾದ್ ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಶುಕ್ರವಾರ ನಡೆದ ದಾಳಿಯನ್ನು “ಹೇಡಿತನದ ಕೃತ್ಯ ಮತ್ತು ಭಾರತದ ಮೌಲ್ಯಗಳ ಮೇಲಿನ ದಾಳಿ” ಎಂದು ಪೋಸ್ಟ್ ಮಾಡಿದ್ದಾರೆ.