ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ರಾಜಸ್ಥಾನ ಹೈಕೋರ್ಟ್ ಮಂಗಳವಾರ 7 ದಿನಗಳ ಪೆರೋಲ್ ಮಂಜೂರು ಮಾಡಿದೆ.
ಅವರಿಗೆ ವೈದ್ಯಕೀಯ ಆಧಾರದ ಮೇಲೆ ಪೆರೋಲ್ ನೀಡಲಾಗಿದೆ. ಪೊಲೀಸ್ ಕಸ್ಟಡಿಯಲ್ಲಿ ಚಿಕಿತ್ಸೆಗಾಗಿ ಮಹಾರಾಷ್ಟ್ರಕ್ಕೆ ಕರೆದೊಯ್ಯಲಾಗುತ್ತದೆ. ಹೈಕೋರ್ಟ್‌ನ ನ್ಯಾಯಮೂರ್ತಿ ಡಾ ಪುಷ್ಪೇಂದ್ರ ಸಿಂಗ್ ಭಾಟಿ ನೇತೃತ್ವದ ಪೀಠವು ಪೆರೋಲ್ ಮಂಜೂರು ಮಾಡಿದೆ.
ಈ ವರ್ಷದ ಮಾರ್ಚ್‌ನಲ್ಲಿ, ಪುಣೆಯ ವೈದ್ಯಕೀಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ಜೈಲಿನಲ್ಲಿರುವ ಅಸಾರಾಂ ಸಲ್ಲಿಸಿದ್ದ ಅರ್ಜಿಯನ್ನು ರಾಜಸ್ಥಾನ ಹೈಕೋರ್ಟ್ ತಿರಸ್ಕರಿಸಿತ್ತು. ಅಸಾರಾಮ್ ಆಸ್ಪತ್ರೆಯಲ್ಲಿದ್ದ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಸಂಭವನೀಯ ಅಪಾಯದ ಬಗ್ಗೆ ಕಳವಳ ವ್ಯಕ್ತಪಡಿಸುವ ವರದಿಯನ್ನು ಪುಣೆ ಪೊಲೀಸರು ಸಲ್ಲಿಸಿದ ನಂತರ ನ್ಯಾಯಾಲಯ ನಿರ್ಧಾರ ತಿಳಿಸಿದೆ.
ಪುಣೆಯ ಮಾಧವ್‌ಬಾಗ್ ಮಲ್ಟಿಡಿಸಿಪ್ಲಿನರಿ ಕಾರ್ಡಿಯಾಕ್ ಕೇರ್ ಕ್ಲಿನಿಕ್ ಮತ್ತು ಆಸ್ಪತ್ರೆಯಲ್ಲಿ ಆಯುರ್ವೇದ ವ್ಯವಸ್ಥೆಯಡಿಯಲ್ಲಿ ತಮ್ಮ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಅವರು ಹೈಕೋರ್ಟ್‌ನಲ್ಲಿ ಅನುಮತಿ ಕೋರಿದ್ದರು.