Gruha Lakshmi Scheme : ಆಶಾ, ಅಂಗನವಾಡಿ ಕಾರ್ಯಕರ್ತೆಯರ ಖಾತೆಗೂ 2000 ರೂ ಹಣ ಜಮಾ

ಬೆಂಗಳೂರು : ನಾಳೆ ‘ಗೃಹಲಕ್ಷ್ಮಿ’ ಯೋಜನೆಗೆ ಮೈಸೂರಿನಲ್ಲಿ ಅಧಿಕೃತ ಚಾಲನೆ ಸಿಗಲಿದ್ದು, ಫಲಾನುಭವಿಗಳ ಖಾತೆಗೆ 2000 ರೂ ಹಣ ವರ್ಗಾವಣೆಯಾಗಲಿದೆ.

ಆಶಾ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿಯರಿಗೆ ಗೃಹಲಕ್ಷ್ಮಿಯ 2000 ರೂ ನೀಡುವುದಿಲ್ಲ ಎಂದು ಹೇಳಲಾಗಿತ್ತು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೂ 2000 ರೂ ನೀಡಲಾಗುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಗೊಂದಲಕ್ಕೆ ಒಳಗಾಗಬಾರದು. ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೂ 2000 ರೂ ಹಣ ಜಮಾ ಆಗಲಿದೆ ಎಂದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಆರ್ಥಿಕ ನೆರವು ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರಂದು ನಾಳೆ ಮೈಸೂರಿನಲ್ಲಿ ಅಧಿಕೃತ ಚಾಲನೆ ಸಿಗಲಿದೆ.
ಕಾಂಗ್ರೆಸ್ ಸರ್ಕಾರಕ್ಕೆ 100 ದಿನ ತುಂಬಿದ ಸಂದರ್ಭದಲ್ಲಿಯೇ ಸಿಎಂ ಮೈಸೂರು ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೊಳ್ಳಲಿದೆ. ನಾಳೆ ಸಿಎಂ ಸಿದ್ದರಾಮಯ್ಯ ಎಲ್ಲಾ ಮಹಿಳಾ ಫಲಾನುಭವಿಗಳ ಖಾತೆಗೆ 2000 ಹಣ ವರ್ಗಾವಣೆ ಮಾಡಲಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read