alex Certify BIG NEWS: ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಆಶಾಕಾರ್ಯಕರ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಆಶಾಕಾರ್ಯಕರ್ತೆ

ಹೈದರಾಬಾದ್: ಆಶಾಕಾರ್ಯಕರ್ತೆಯೊಬ್ಬರು ಪೊಲೀಸ್ ಅಧಿಕಾರಿಯೊಬ್ಬರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ವೇತನ ಹೆಚ್ಚಳಕ್ಕಾಗಿ ಆಗ್ರಹಿಸಿ ಆಶಾಕಾರ್ಯಕರ್ತೆಯರು ಹೈದರಾಬಾದ್ ನ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಪ್ರತಿಭತನಾಕಾರರು ಕಚೇರಿಯತ್ತ ಮುನ್ನುಗ್ಗುತ್ತಿದ್ದಂತೆ ಪೊಲೀಸರು ತಡೆದಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ.

ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಪ್ರತಿಭಾನಾ ನಿರತ ಆಶಾಕಾರ್ಯಕರ್ತೆಯರನ್ನು ವಶಕ್ಕೆ ಪಡೆದು ವಾಹನಕ್ಕೆ ಹತ್ತಿಸಿದ್ದಾರೆ. ಈ ವೇಳೆ ಆಶಾಕಾರ್ಯಕರ್ತೆಯೊಬ್ಬರ ಕಾಲು ವಾಹನದ ಬಾಗಿಲಿನಲ್ಲಿ ಸಿಲುಕಿಕೊಂಡಿದೆ. ಇದರಿಂದ ಸಿಟ್ಟಿಗೆದ್ದ ಮಹಿಳೆ ಪೊಲೀಸ್ ಅಧಿಕರಿಗೆ ಕಪಳಮೋಕ್ಷ ಮಾಡಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲಿಸರು ತನಿಖೆ ನಡೆಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...