ಮೈಸೂರು : ಆಷಾಡ ಶುಕ್ರವಾರದ ಪ್ರಯುಕ್ತ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಲು ವಿಶೇಷ ಕೆಎಸ್ ಆರ್ ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ.
ಮೈಸೂರು ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಪ್ರಯುಕ್ತ ಹಲವಾರು ಅನುಕೂಲಗಳನ್ನು ಕಲ್ಪಿಸಲಾಗಿದ್ದು, ಈ ಬಾರಿಯೂ ಪಾಸ್ ವ್ಯವಸ್ಥೆ ಇರುವುದಿಲ್ಲ. ದರ್ಶನಕ್ಕೆ ವಿಶೇಷ ಟಿಕೆಟ್ ವ್ಯವಸ್ಥೆ ಇದೆ. ಆಷಾಢ ಶುಕ್ರವಾರಗಳಾದ ಜುಲೈ 12,19,26, ಆಗಸ್ಟ್ 26 ಮತ್ತು ಚಾಮುಂಡೇಶ್ವರಿ ವರ್ಧಂತಿ ದಿನವಾದ 27 ರಂದು ದೇವಾಲಯದ ವತಿಯಿಂದ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಬೆಟ್ಟಕ್ಕೆ ಪ್ರಯಾಣಿಸಲು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.