
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಅಲಂಕಾರ ಪೂಜೆ ನೆರವೇರಿಸಲಾಗುವುದು.
ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ. ಮೈಸೂರು ಜಿಲ್ಲಾಡಳಿತದಿಂದ ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಮೈಸೂರಿನ ಲಲಿತ ಮಹಲ್ ಮೈದಾನದಿಂದ ಉಚಿತ ಬಸ್ ಗಳ ವ್ಯವಸ್ಥೆ ಇರಲಿದೆ. ಚಾಮುಂಡಿ ಬೆಟ್ಟದಲ್ಲಿ ಭಕ್ತರಿಗೆ ಅನ್ನದಾಸೋಹ, ಪ್ರಸಾದ ವ್ಯವಸ್ಥೆ ಮಾಡಲಾಗಿದೆ.