Mysuru : ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ಸಂಭ್ರಮ : 60 ವರ್ಷ ಮೇಲ್ಪಟ್ಟವರಿಗೆ ನೇರ ದರ್ಶನಕ್ಕೆ ಅವಕಾಶ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಅಲಂಕಾರ ಪೂಜೆ ನಡೆಯಲಿದ್ದು, 60 ವರ್ಷ ಮೇಲ್ಪಟ್ಟವರಿಗೆ ನೇರ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಅಲಂಕೃತ ದೇವಿ ಮೂರ್ತಿಯನ್ನು ಕಣ್ತುಂಬಿಕೊಳ್ಳಲು ಭಕ್ತರು ಉತ್ಸುಕರಾಗಿದ್ದು, ಬೆಟ್ಟದಲ್ಲಿಸಂಭ್ರಮ ಮನೆ ಮಾಡಿದೆ. ನಗರದ ಲಲಿತಮಹಲ್ ಹೆಲಿಪ್ಯಾಡ್ ಸಮೀಪದಿಂದ ಸಾರ್ವಜನಿಕರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಇಲ್ಲಿಯೇ ಸ್ವಂತ ವಾಹನಗಳನ್ನು ನಿಲ್ಲಿಸಿ ಭಕ್ತರು ದೇವಿ ದರ್ಶನಕ್ಕೆ ತೆರಳಬಹುದು. ಮೈಸೂರು ಜಿಲ್ಲಾಡಳಿತದಿಂದ ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಮೈಸೂರಿನ ಲಲಿತ ಮಹಲ್ ಮೈದಾನದಿಂದ ಉಚಿತ ಬಸ್ ಗಳ ವ್ಯವಸ್ಥೆ ಇರಲಿದೆ. ಚಾಮುಂಡಿ ಬೆಟ್ಟದಲ್ಲಿ ಭಕ್ತರಿಗೆ ಅನ್ನದಾಸೋಹ, ಪ್ರಸಾದ ವ್ಯವಸ್ಥೆ ಮಾಡಲಾಗಿದೆ.

ಜಿಲ್ಲಾಡಳಿತದಿಂದ ಚಾಮುಂಡಿ ಬೆಟ್ಟಕ್ಕೆ ಉಚಿತ ಬಸ್ ವ್ಯವಸ್ಥೆ ಮಾಡಿಸಲಾಗಿದ್ದು, ಜನರು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.ಜೂ., 30, ಜುಲೈ 7, 10 ಹಾಗೂ 14ರಂದು ಚಾಮುಂಡಿ ಬೆಟ್ಟಕ್ಕೆ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದ್ದು, ಯಾವುದೇ ಕಾರಣಕ್ಕೂ ಖಾಸಗಿ ವಾಹನಗಳ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read