alex Certify ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ: 2-0 ಮುನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ: 2-0 ಮುನ್ನಡೆ

ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ತಂಡ ಎರಡನೇ ಟೆಸ್ಟ್ ನಲ್ಲಿಯೂ ಭರ್ಜರಿ ಜಯ ಸಾಧಿಸಿದೆ.

275 ರನ್ ಗಳ ಬೃಹತ್ ಅಂತರದಿಂದ ಆಸ್ಟ್ರೇಲಿಯಾ ಗೆದ್ದಿದ್ದು, ಈ ಮೂಲಕ 5 ಟೆಸ್ಟ್ ಗಳ ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿದೆ.

ಬ್ರಿಸ್ಬೇನ್ ನಲ್ಲಿ ನಡೆದ ಮೊದಲ ಟೆಸ್ಟ್ ನಲ್ಲಿ ಆಸ್ಟ್ರೇಲಿಯಾ ತಂಡ 9 ವಿಕೆಟ್ ಗಳಿಂದ ಗೆದ್ದಿತ್ತು. ಎರಡನೇ ಟೆಸ್ಟ್ ನಲ್ಲಿ ಇಂಗ್ಲೆಂಡ್ ತಂಡಕ್ಕೆ 488 ರನ್ ಗಳ ಬೃಹತ್ ಮೊತ್ತದ ಗುರಿ ನೀಡಲಾಗಿತ್ತು. ಆದರೆ, ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡವು ಕೇವಲ 192 ರನ್ ಗಳಿಗೆ ಆಲ್ ಔಟ್ ಆಗುವ ಮೂಲಕ ಮುಖಭಂಗ ಅನುಭವಿಸಿತು. ಇಂಗ್ಲೆಂಡ್ ಪರ ಯಾವುದೇ ಆಟಗಾರ ಅರ್ಧ ಶತಕ ಗಳಿಸಲಿಲ್ಲ. ಹೀಗಾಗಿ ಸುಲಭವಾಗಿ ಸೋಲಿಗೆ ತುತ್ತಾಯಿತು.

ಆಸ್ಟ್ರೇಲಿಯಾ ಪರ ಝೈ ರಿಚರ್ಡಸನ್ 5 ವಿಕೆಟ್ ಪಡೆದು ಮಿಂಚಿದರು. ಉಳಿದಂತೆ ಮಿಚೆಲ್ ಸ್ಟಾರ್ಕ್ ಹಾಗೂ ಲಿಯಾನ್ ತಲಾ ಎರಡು ವಿಕೆಟ್ ಪಡೆದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...