
ಬೆಂಗಳೂರು: ರಾಜಧಾನಿ ಬೆಂಗಳೂರಿನ ಜನತೆಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬೆಂಗಳೂರು ಅಭಿವೃದ್ಧಿಗೆ ಸರ್ಕಾರದಿಂದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗುವುದು.
ಕಂದಾಯ ಸಚಿವ ಆರ್. ಅಶೋಕ್ ಅವರು, ಬೆಂಗಳೂರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗುವುದು ಎಂದು ಹೇಳಿದ್ದಾರೆ. 15 ದಿನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದ್ದಾರೆ. ವಿಶೇಷ ಪ್ಯಾಕೇಜ್ ಘೋಷಣೆಯಾದರೆ ಬೆಂಗಳೂರು ಮತ್ತಷ್ಟು ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.