ಹಾಸನ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿರುವುದಕ್ಕೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅಶ್ವತ್ಥ್ ನಾರಾಯಣ, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಇಂತಹ ಹೇಳಿಕೆ ನೀಡಬಾರದು. ಸಚಿವ ಉಮೇಶ್ ಕತ್ತಿ ಹೇಳಿಕೆಯನ್ನು ಖಂಡಿಸುತ್ತೇನೆ. ನಾಡಿನ ಜನರ ಪರವಾಗಿ ನಾನು ಅವರ ಹೇಳಿಕೆಯನ್ನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.
ಸಾಕಷ್ಟು ಮಹಾನೀಯರು ಹೋರಾಡಿ ರಾಜ್ಯವನ್ನು ಕಟ್ಟಿದ್ದಾರೆ. ಪ್ರಧಾನಿ ಮೋದಿಯವರಲ್ಲಿ ಇಂತಹ ಚಿಂತನೆ ಇರುವುದಿಲ್ಲ. ಕರ್ನಾಟಕ ರಾಜ್ಯ ವಿಭಜನೆ ಎನ್ನುವ ಪ್ರಶ್ನೆಯೇ ಬರುವುದಿಲ್ಲ. ದಯವಿಟ್ಟು ಇದರಲ್ಲಿ ಪ್ರಧಾನಿ ಹೆಸರನ್ನು ತರುವುದು ಬೇಡ ಎಂದು ಸಚಿವ ಉಮೇಶ್ ಕತ್ತಿ ಹೇಳಿಕೆ ಬಗ್ಗೆ ಅಶ್ವತ್ಥ್ ನಾರಾಯಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.