
ದೊಡ್ಡಬಳ್ಳಾಪುರ: ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಯಾಗಲಿದೆ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ಮಾತನಾಡಿದ ಅವರು, ಸಂಕ್ರಾಂತಿ ಮುಗಿಯುತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಆಗಬಹುದು. ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ. ಹೈಕಮಾಂಡ್ ಜೊತೆ ಚರ್ಚಿಸಿ ಸಿಎಂ ಬಸವರಾಜ ಬೊಮ್ಮಾಯಿ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.