alex Certify ಸಿದ್ಧರಾಮಯ್ಯರನ್ನು ಹೊಡೆದು ಹಾಕಿ ಎಂದು ಹೇಳಿದ್ದ ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ಧರಾಮಯ್ಯರನ್ನು ಹೊಡೆದು ಹಾಕಿ ಎಂದು ಹೇಳಿದ್ದ ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್

ಮೈಸೂರು: ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ಹೇಳಿಕೆ ನೀಡಿದ್ದ ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಫೆಬ್ರವರಿ ತಿಂಗಳಿನಲ್ಲಿ ಅಶ್ವತ್ಥ್ ನಾರಾಯಣ ನೀಡಿದ ಹೇಳಿಕೆ ವಿರುದ್ಧ ಈಗ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೆಬ್ರವರಿ 16 ರಂದು ಅಶ್ವತ್ಥ್ ನಾರಾಯಣ ಅವರು, ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ಹೇಳಿಕೆ ನೀಡಿದ್ದು, ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಅವರು ಮೈಸೂರಿನ ದೇವರಾಜ ಠಾಣೆಗೆ ದೂರು ನೀಡಿದ್ದರು. ಅಂದಿನಿಂದ ದೂರಿನ ಬಗ್ಗೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇಂದು ಠಾಣೆಗೆ ತೆರಳಿ ಮತ್ತೆ ಲಕ್ಷ್ಮಣ ದೂರು ಸಲ್ಲಿಸಿದ್ದು, ಅವರು ನೀಡಿದ ದೂರಿನ ಅನ್ವಯ ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...