alex Certify BIG NEWS: ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಂಶುಪಾಲರ ನೇಮಕ, ಉಪನ್ಯಾಸಕರ ವರ್ಗಾವಣೆಗೆ ಮತ್ತೆ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಂಶುಪಾಲರ ನೇಮಕ, ಉಪನ್ಯಾಸಕರ ವರ್ಗಾವಣೆಗೆ ಮತ್ತೆ ಚಾಲನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 410 ಪ್ರಾಂಶುಪಾಲರ ಹುದ್ದೆಗಳಿಗೆ ಹಿರಿಯ ಉಪನ್ಯಾಸಕರನ್ನು ಕೌನ್ಸೆಲಿಂಗ್ ಮೂಲಕ ನೇಮಕ ಪ್ರಭಾರಿ ಪ್ರಾಂಶುಪಾಲರಾಗಿ ನೇಮಕ ಮಾಡಿಕೊಳ್ಳಲಾಗುವುದು.

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿದ್ದು, ಈ ಹುದ್ದೆಗಳಲ್ಲಿ ಗ್ರೇಡ್-1 ದರ್ಜೆಯ 327 ಹುದ್ದೆಗಳು ಪದವಿ ಕಾಲೇಜುಗಳಲ್ಲಿ ಮತ್ತು ಗ್ರೇಡ್-2 ದರ್ಜೆಯ 38 ಹುದ್ದೆಗಳು ಸ್ನಾತಕೋತ್ತರ ಕೋರ್ಸ್ ಇರುವ ಪದವಿ ಕಾಲೇಜುಗಳಲ್ಲಿ ಲಭ್ಯವಿವೆ. ಈ ಹುದ್ದೆಗಳಲ್ಲಿ ಇದುವರೆಗೂ ಕಾರ್ಯ ನಿರ್ವಹಿಸುತ್ತಿದ್ದವರು ಫೆಬ್ರವರಿ ತಿಂಗಳಲ್ಲಿ ನಿವೃತ್ತರಾಗಿದ್ದಾರೆ. ಹೀಗಾಗಿ, ಕಾಲೇಜುಗಳಲ್ಲಿ ನಾಯಕತ್ವದ ಕೊರತೆ ಉಂಟಾಗಬಾರದೆಂಬ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಸರ್ಕಾರಿ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಕೂಡ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲೇ ಕೌನ್ಸೆಲಿಂಗ್ ಮೂಲಕವೇ ನಡೆಯಲಿದೆ. ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಗೆ ಕೆಎಟಿ ತಡೆಯಾಜ್ಞೆ ನೀಡಿದ್ದರಿಂದ, ವಿಳಂಬವಾಗಿದ್ದು, ಈಗ ಈ ತಡೆಯಾಜ್ಞೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...