ಬೆಂಗಳೂರು: ರಾಜ್ಯದ ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಜುಲೈ 11 ರಿಂದ ಅಧಿಕೃತವಾಗಿ ಆರಂಭವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಶುಲ್ಕ ಪಾವತಿ ಪ್ರಕ್ರಿಯೆ ಕೂಡ ಆನ್ಲೈನ್ ನಲ್ಲಿ ನಡೆಯಲಿದೆ. 2022 -23ನೇ ಶೈಕ್ಷಣಿಕ ವರ್ಷದಿಂದ ಉನ್ನತ ಶಿಕ್ಷಣ ಇಲಾಖೆ ಸಮಗ್ರ ವಿಶ್ವವಿದ್ಯಾಲಯ ಕಾಲೇಜು ನಿರ್ವಹಣಾ ವ್ಯವಸ್ಥೆ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸುತ್ತಿದೆ. ವಿಧ್ಯಾರ್ಥಿಗಳು ಒಂದೇ ಅರ್ಜಿಯಲ್ಲಿ ಹಲವು ಕಾಲೇಜುಗಳಿಗೂ ಸೀಟು ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದರು.
ಹೊಸ ತಂತ್ರಾಂಶದಲ್ಲಿ ಮಾಹಿತಿ ಅಳವಡಿಸಲು ವಿವಿಗಳು ಮತ್ತು ಕಾಲೇಜುಗಳು ವಿಳಂಬ ಮಾಡಿದ ಕಾರಣ ಪ್ರವೇಶ ಪ್ರಕ್ರಿಯೆ ಸ್ವಲ್ಪ ತಡವಾಗಿ ಆರಂಭವಾಗಿದ್ದು, ಶೀಘ್ರದಲ್ಲೇ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಜುಲೈ 11 ರಿಂದ ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ಆನ್ಲೈನ್ ಮೂಲಕ ವಿದ್ಯಾರ್ಥಿಗಳು ಕಾಲೇಜುಗಳ ಶುಲ್ಕ ಪಾವತಿಸಬಹುದಾಗಿದೆ ಎಂದು ತಿಳಿಸಿದ್ದಾರೆ.