alex Certify ಉಪನ್ಯಾಸಕರ ನೇಮಕಾತಿ ಬಗ್ಗೆ ಸಚಿವರಿಂದ ಮಾಹಿತಿ: ಗುಣಮಟ್ಟದ ಶಿಕ್ಷಣ ಬಿಜೆಪಿ ಹಿಡನ್ ಅಜೆಂಡಾ; ಅಶ್ವತ್ಥನಾರಾಯಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಪನ್ಯಾಸಕರ ನೇಮಕಾತಿ ಬಗ್ಗೆ ಸಚಿವರಿಂದ ಮಾಹಿತಿ: ಗುಣಮಟ್ಟದ ಶಿಕ್ಷಣ ಬಿಜೆಪಿ ಹಿಡನ್ ಅಜೆಂಡಾ; ಅಶ್ವತ್ಥನಾರಾಯಣ

ಮೈಸೂರು ವಿಶ್ವವಿದ್ಯಾಲಯಕ್ಕೆ ಬೋಧಕರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವೊಂದು ಕಾರಣದಿಂದ ಬೋಧಕರ ನೇಮಕಾತಿಗೆ ತಡೆಯಿದೆ ಎಂದು ಮೈಸೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಬೋಧಕರ ನೇಮಕ ಮಾಡಲಾಗುವುದು. ಅತ್ಯಂತ ಪಾರದರ್ಶಕವಾಗಿ ಬೋಧಕರನ್ನು ನೇಮಿಸಲಾಗುವುದು. ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಅತಿಥಿ ಉಪನ್ಯಾಸಕರು, ಅರೆಕಾಲಿಕ ಉಪನ್ಯಾಸಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಆಫ್ಘನ್ ವಿದ್ಯಾರ್ಥಿಗಳಿಗೆ ನೆರವು:

ಮೈಸೂರು ವಿಶ್ವವಿದ್ಯಾನಿಲಯದಲ್ಲಿನ ಆಫ್ಘಾನಿಸ್ತಾನದ ವಿದ್ಯಾರ್ಥಿಗಳ ವೀಸಾ ವಿಚಾರಕ್ಕೆ ಸಂಬಂಧಿಸಿದಂತೆ ಮಾನವೀಯತೆ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ನೆರವು ನೀಡಲಾಗುವುದು ಎಂದು ಅಶ್ವತ್ಥ ನಾರಾಯಣ ಹೇಳಿದ್ದಾರೆ. ಆಫ್ಘಾನಿಸ್ತಾನದ ವಿದ್ಯಾರ್ಥಿಗಳ ಬೆಂಬಲಕ್ಕೆ ನಾವು ಸಿದ್ಧರಿದ್ದೇವೆ. ಅಗತ್ಯ ನೆರವು ನೀಡಲು ನಾವು ಸಿದ್ಧರಿದ್ದೇವೆ ಎಂದು ಅವರು ಹೇಳಿದ್ದಾರೆ

ಗುಣಮಟ್ಟದ ಶಿಕ್ಷಣ ಬಿಜೆಪಿ ಅಜೆಂಡಾ:

ಗುಣಮಟ್ಟದ ಶಿಕ್ಷಣ ನೀಡುವುದು ಬಿಜೆಪಿಯ ಹಿಡನ್ ಅಜೆಂಡಾ ಆಗಿದೆ. ಅಜೆಂಡಾ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಅಳವಡಿಕೆಯಾಗಿದೆ ಎಂದು ಅಶ್ವತ್ಥನಾರಾಯಣ ಹೇಳಿದ್ದಾರೆ.

ಇದಕ್ಕೆ ಕಾಂಗ್ರೆಸ್ ನಾಯಕರು ವಿರೋಧಿಸಿದರೆ ವಿರೋಧಿಸಲಿ. ಕಾಂಗ್ರೆಸ್ ನವರು ವಿರೋಧ ಮಾಡಿದರೆ ನಮ್ಮದೇನು ತಕರಾರಿಲ್ಲ. ಬ6ಹಳ ವರ್ಷಗಳ ಬಳಿಕ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಯಾಗುತ್ತಿದೆ. ಕೆಲವು ಮಾರ್ಪಾಡುಗಳು ಕೌಶಲ್ಯಯುತವಾಗಿ ಬದಲಾಗುತ್ತಿವೆ. ಬದಲಾವಣೆಗಳು ಯುವಪೀಳಿಗೆಗೆ ಬಹಳ ಸಹಾಯವಾಗಿವೆ. ತಜ್ಞರ ಅಭಿಪ್ರಾಯ ಸಂಗ್ರಹಿಸಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...