ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಆರೋಪ ಕೇಳಿಬಂದಿದೆ. ಅಲ್ಲದೇ ಹೈಕೋರ್ಟ್, ಡಿ.ಕೆ.ಶಿ ವಿರುದ್ಧ ತನಿಖೆಗೆ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಮೊದಲು ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಅಶ್ವತ್ಥನಾರಾಯಣ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವತ್ಥನಾರಾಯಣ, ಸಿಬಿಐ ತನಿಖೆ ಪಾರದರ್ಶಕವಾಗಿ ನಡೆಯಬೇಕು ಎಂದರೆ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಲಿ. ನಮ್ಮ ವಿರುದ್ಧ ಪೇ ಸಿಎಂ ಅಭಿಯಾನ ನಡೆಸಿ ರಾಜೀನಾಮೆಗೆ ಆಗ್ರಹಿಸಿದ್ದರು. ಈಗ ಅವರ ವಿರುದ್ಧ ಆರೋಪವಿದೆ ಎಂದು ಗುಡುಗಿದರು.
ಉಪಮುಖ್ಯಮಂತ್ರಿಯಾಗಿರುವ ಡಿ.ಕೆ.ಶಿವಕುಮಾರ್ ವಿರುದ್ಧ ಕೇಳಿಬಂದಿರುವ ಆರೋಪದ ಬಗ್ಗೆ ಮುಕ್ತ ತನಿಖೆಯಾಗಬೇಕು ಹೀಗಾಗಿ ಡಿ.ಕೆ.ಶಿ ರಾಜೀನಾಮೆ ಕೊಡಬೇಕು ಎಂಬುದು ನಮ್ಮ ಪಕ್ಷದ ಆಗ್ರಹ ಎಂದು ಒತ್ತಾಯಿಸಿದ್ದಾರೆ.