alex Certify BIG NEWS: ಪಾರ್ವತಮ್ಮ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಹೆಸರಲ್ಲಿ 2 ಗೋಲ್ಡ್ ಮೆಡಲ್ ಘೋಷಿಸಿದ ಅಶ್ವಿನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಾರ್ವತಮ್ಮ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಹೆಸರಲ್ಲಿ 2 ಗೋಲ್ಡ್ ಮೆಡಲ್ ಘೋಷಿಸಿದ ಅಶ್ವಿನಿ

ಮೈಸೂರು: ಮೈಸೂರು ವಿಶ್ವ ವಿದ್ಯಾಲಯ ದಿ. ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ್ದು, ಪುನೀತ್ ಪರವಾಗಿ ಗೌರವ ಸ್ವೀಕರಿಸಿದ ಪತ್ನಿ ಅಶ್ವಿನಿ, ಎರಡು ಬಂಗಾರದ ಪದಕಗಳನ್ನು ಘೋಷಿಸಿದ್ದಾರೆ.

ಪಾರ್ವತಮ್ಮ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಅವರ ಹೆಸರಲ್ಲಿ ಎರಡು ಬಂಗಾರದ ಪದಕಗಳನ್ನು ಪ್ರತಿ ವರ್ಷ ಮೈಸೂರು ವಿಶ್ವ ವಿದ್ಯಾಲಯದ ಘಟಿಕೋತ್ಸವದಲ್ಲಿ ಪ್ರದಾನ ಮಾಡಲಾಗುವುದು ಎಂದು ಹೇಳಿದ್ದಾರೆ.

ಬ್ಯುಸಿನೆಸ್ ಮ್ಯಾನೇಜ್ ಮೆಂಟ್ ವಿಭಾಗದಲ್ಲಿ ಪಾರ್ವತಮ್ಮ ರಾಜ್ ಕುಮಾರ್ ಹೆಸರಲ್ಲಿ ಹಾಗೂ ಲಲಿತ ಕಲೆ ವಿಭಾಗದಲ್ಲಿ ಪುನೀತ್ ರಾಜ್ ಕುಮಾರ್ ಹೆಸರಲ್ಲಿ ಬಂಗಾರದ ಪದಕ ನೀಡಲಾಗುವುದು. ಮುಂದಿನ ವರ್ಷದಿಂದಲೇ ಪದಕ ಪ್ರದಾನ ನಡೆಯಲಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...