ಬೆಂಗಳೂರು: ಉದ್ಯಮಿಯೊಬ್ಬರಿಂದ ಎಎಸ್ ಐ ಓರ್ವರು 5 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಎಎಸ್ಐ ದಯಾನಂದ ಅವರ ಲಂಚಬಾಕತನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಬಗ್ಗೆ ಸ್ವತ: ಉದ್ಯಮಿ ಭರತ್ ಶೆಟ್ಟಿ ಎಂಬುವವರು ಕೋಡಿಗೆಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದು, ಎಎಸ್ಐ ವಿರುದ್ಧ ದೂರು ದಾಖಲಾಗಿದೆ.
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾದ ಆರೋಪಿಗಳು
ವಂಚನೆ ಎಸಗಿ ನಿವೇಶನ ಖರೀದಿ ಮಾಡಿದ್ದಾರೆ ಎಂದು ಆರೋಪಿಸಿ ಉದ್ಯಮಿ ಭರತ್ ಶೆಟ್ಟಿ ವಿರುದ್ಧ ಮಲ್ಲೇಶ್ವರಂ ನಿವಾಸಿಯೊಬ್ಬರು ಕೋಡಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದಲ್ಲಿ ಬಿ ರಿಪೋರ್ಟ್ ಹಾಕಲು ಎಎಸ್ಐ, ಭರತ್ ಶೆಟ್ಟಿಯಿಂದ 10 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದರು. ತಾನು ಈಶಾನ್ಯ ಭಾಗದ ಡಿಸಿಪಿ ಆಪ್ತ ಎಂದು ಹೇಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಲಂಚದ ಮೊದಲ ಭಾಗವಾಗಿ 5 ಲಕ್ಷ ರೂಪಾಯಿ ಹಣವನ್ನು ದಯಾನಂದ ಪಡೆದುಕೊಂಡಿದ್ದು, ಹಣ ಪಡೆಯುತ್ತಿದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಬ್ಲಾಕ್ ಫಂಗಸ್: ನಿಮ್ಮೆಲ್ಲಾ ಪ್ರಶ್ನೆಗಳಿಗೆ ಡಾ. ರಾಜು ನೀಡಿದ್ದಾರೆ ಉತ್ತರ
ಇದೀಗ ಹಣ ಪಡೆಯುತ್ತಿರುವ ವಿಡಿಯೋ ಸಮೇತ ಎಎಸ್ಐ ದಯಾನಂದ ವಿರುದ್ಧ ಭರತ್ ಶೆಟ್ಟಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.