
ಬೆಂಗಳೂರು: ಕರ್ತವ್ಯ ನಿರತ ಎಎಸ್ಐ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಿವಶಂಕರಚಾರಿ ಮೃತಪಟ್ಟವರು ಎಂದು ಹೇಳಲಾಗಿದೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಎಎಸ್ಐ ಆಗಿ ಅವರು ಕಾರ್ಯನಿರ್ವಹಿಸುತ್ತಿದ್ದರು. ರೌಂಡ್ಸ್ ವೇಳೆಯಲ್ಲಿ ಅವರಿಗೆ ಉಸಿರಾಟದ ಸಮಸ್ಯೆ ಉಂಟಾಗಿದೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ತೆರಳಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 1999ರಲ್ಲಿ ಶಿವಶಂಕರ್ ಪೊಲೀಸ್ ಇಲಾಖೆಗೆ ಸೇರಿದ್ದರು.