ಬೆಳಗಾವಿ: ಐಗಳಿ ಪೊಲೀಸ್ ಠಾಣೆಯ ಎಎಸ್ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ವಗ್ರಾಮ ಅನಂತಪುರದಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ.
ಶಂಭು ಮೇತ್ರಿ(50) ಆತ್ಮಹತ್ಯೆ ಮಾಡಿಕೊಂಡ ಎಎಸ್ಐ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಅನಂತಪುರ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.