alex Certify ASIA CUP: ಭಾರತ – ಪಾಕ್ ಮ್ಯಾಚ್ ಸಂದರ್ಭದಲ್ಲಿ ಪಾಕಿಸ್ತಾನದ ಜರ್ಸಿ ಧರಿಸಿ ಸಂಕಷ್ಟಕ್ಕೆ ಸಿಲುಕಿದ ಯುವಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ASIA CUP: ಭಾರತ – ಪಾಕ್ ಮ್ಯಾಚ್ ಸಂದರ್ಭದಲ್ಲಿ ಪಾಕಿಸ್ತಾನದ ಜರ್ಸಿ ಧರಿಸಿ ಸಂಕಷ್ಟಕ್ಕೆ ಸಿಲುಕಿದ ಯುವಕ

ದುಬೈನಲ್ಲಿ ಏಷ್ಯಾ ಕಪ್ ಪಂದ್ಯಗಳು ನಡೆಯುತ್ತಿವೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಹೈ ವೋಲ್ಟೇಜ್ ಮ್ಯಾಚ್ ನಲ್ಲಿ ಟೀಮ್ ಇಂಡಿಯಾ ಆಟಗಾರರು ಜಯಭೇರಿ ಬಾರಿಸಿದ್ದಾರೆ. ಇದರ ಮಧ್ಯೆ ಮ್ಯಾಚ್ ನೋಡಲೆಂದೇ ದುಬೈಗೆ ತೆರಳಿದ್ದ ಉತ್ತರ ಪ್ರದೇಶದ ಬರೇಲಿ ಯುವಕ ಈಗ ಸಂಕಷ್ಟಕ್ಕೆ ಸಿಲುಕಿದ್ದಾನೆ.

ಹೌದು, ಉತ್ತರ ಪ್ರದೇಶದ ಸಯಮ್ ಜೈಸ್ವಾಲ್ ಭಾರತ ಮತ್ತು ಪಾಕ್ ನಡುವಿನ ಪಂದ್ಯ ವೀಕ್ಷಿಸಲು ದುಬೈಗೆ ತೆರಳಿದ್ದರು. ಈ ವೇಳೆ ಅವರಿಗೆ ಭಾರತದ ಜರ್ಸಿ ಸಿಕ್ಕಿರಲಿಲ್ಲ. ಹೀಗಾಗಿ ಪ್ರಾಂಕ್ ಮಾಡಲೆಂದು ತಮಗೆ ಸಿಕ್ಕ ಪಾಕಿಸ್ತಾನದ ಜರ್ಸಿ ಧರಿಸಿ ಭಾರತದ ಬಾವುಟ ಬೀಸಿದ್ದರು.

ಇದನ್ನು ಗಮನಿಸಿರುವ ಭಾರತದ ಕ್ರಿಕೆಟ್ ಪ್ರೇಮಿಗಳು ಗರಂ ಆಗಿದ್ದಾರೆ. ಜೈಸ್ವಾಲ್ ಪಾಕಿಸ್ತಾನದ ಪರವಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...