ಹಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಸ್ಪರ್ಧಿಗಳು ಭರ್ಜರಿ ಪ್ರದರ್ಶನ ಮುಂದುವರೆಸಿದ್ದು, ಪುರುಷರ ರಿಕರ್ವ್ ಆರ್ಚರಿಯಲ್ಲಿ ಭಾರತ ಫೈನಲ್ ಗೆ ಎಂಟ್ರಿ ಕೊಟ್ಟಿದೆ.
ಏಷ್ಯನ್ ಗೇಮ್ಸ್ ರಿಕರ್ವ್ ಪುರುಷರ ತ್ರಿವಳಿ ಸ್ಪರ್ಧೆಯಲ್ಲಿ ಭಾರತದ ಆರ್ಚರ್ ಅಟಾನು, ಧೀರಜ್ ಮತ್ತು ಶ್ರೀಧರ್ ಫೈನಲ್ ಗೆ ಪ್ರವೇಶಿಸಿದ್ದಾರೆ. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕ ಖಚಿತವಾಗಿದೆ.