ಹ್ಯಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ಭಾರತಕ್ಕೆ ಒಂದು ಚಿನ್ನ, ಒಂದು ಬೆಳ್ಳಿ ಪದಕ ಸಿಕ್ಕಿದೆ.ವುಶು ಮಹಿಳೆಯರ 60 ಕೆಜಿ ವಿಭಾಗದಲ್ಲಿ ರೋಶಿಬಿನಾ ಬೆಳ್ಳಿ ಪದಕ ಗೆದ್ದರು.
ವುಶು ಮಹಿಳೆಯರ 60 ಕೆಜಿ ವಿಭಾಗದಲ್ಲಿ ರೋಶಿಬಿನಾ ಬೆಳ್ಳಿ ಪದಕ ಗೆದ್ದರು. ಕುತೂಹಲಕಾರಿ ಸಂಗತಿಯೆಂದರೆ, ರೋಶಿಬಿನಾ ಅವರು 2018 ರಲ್ಲಿ ಜಕಾರ್ತಾ ಎಜಿಯಲ್ಲಿ ಕಂಚಿನ ಪದಕ ಗೆದ್ದಿದ್ದರು, ಇದೀಗ ಏಷ್ಯನ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.
ಭಾರತದ ಪುರುಷರ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಸರಬ್ಜೋತ್ ಸಿಂಗ್, ಶಿವ ನರ್ವಾಲ್ ಮತ್ತು ಅರ್ಜುನ್ ಸಿಂಗ್ ಚೀಮಾ ಚಿನ್ನ ಗೆದ್ದಿದ್ದಾರೆ.