ಹಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಭರ್ಜರಿ ಪ್ರದರ್ಶನ ಮುಂದುವರೆದಿದ್ದು, ಮಹಿಳಾ ಕಬಡ್ಡಿ ಸೆಮಿಫೈನಲ್ ನಲ್ಲಿ ಭಾರತ ತಂಡವು ನೇಪಾಳದ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಫೈನಲ್ ಗೆ ಎಂಟ್ರಿ ಕೊಟ್ಟಿದೆ.
ಏಷ್ಯನ್ ಗೇಮ್ಸ್ ನಲ್ಲಿ ಇಂದು ನಡೆದ ಮಹಿಳಾ ಕಬಡ್ಡಿ ಪಂದ್ಯದಲ್ಲಿ ನೇಪಾಳ ವಿರುದ್ಧ 61-17 ಅಂಕಗಳ ಭರ್ಜರಿ ಜಯ ದಾಖಲಿಸಿದ ಭಾರತ ಮಹಿಳಾ ಕಬಡ್ಡಿ ತಂಡ ಫೈನಲ್ ಪ್ರವೇಶಿಸಿದೆ.