alex Certify ಫೆ. 10 ರಿಂದ ಬೆಂಗಳೂರಿನಲ್ಲಿ ‘ಏರೋ ಇಂಡಿಯಾ-2025’ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೆ. 10 ರಿಂದ ಬೆಂಗಳೂರಿನಲ್ಲಿ ‘ಏರೋ ಇಂಡಿಯಾ-2025’ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ

ಬೆಂಗಳೂರು: ಬೆಂಗಳೂರಿನ ಯಲಹಂಕ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ‘ಏರೋ ಇಂಡಿಯಾ- 2025’ ಫೆಬ್ರವರಿ 10 ರಿಂದ 14ರ ವರೆಗೆ 5 ದಿನಗಳ ಕಾಲ ನಡೆಯಲಿದೆ.

ರಕ್ಷಣಾ ಇಲಾಖೆ, ಭಾರತೀಯ ವಾಯು ಸೇನೆ, ಹೆಚ್.ಎ.ಎಲ್.,  ಡಿ.ಆರ್.ಡಿ.ಒ., ನಾಗರಿಕ ವಿಮಾನಯಾನ ಸಚಿವಾಲಯಗಳು ಜಂಟಿಯಾಗಿ ಆಯೋಜಿಸುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ದೇಶ ವಿದೇಶಗಳ ವೈಮಾನಿಕ ಕ್ಷೇತ್ರದ ನೂರಾರು ಕಂಪನಿಗಳು ಭಾಗವಹಿಸಲಿವೆ.

ಯುದ್ಧವಿಮಾನ, ಹೆಲಿಕಾಪ್ಟರ್, ನಾಗರೀಕ ವಿಮಾನ, ಸಣ್ಣ ವಿಮಾನಗಳು, ಕ್ಷಿಪಣಿಗಳು, ಶಸ್ತ್ರಾಸ್ತ್ರಗಳು, ರಾಡಾರ್ ವ್ಯವಸ್ಥೆ ಸೇರಿದಂತೆ ರಕ್ಷಣಾ ವಲಯ ಮತ್ತು ನಾಗರೀಕ ವಿಮಾನಯಾನಕ್ಕೆ ಸಂಬಂಧಿಸಿದ ಉತ್ಪನ್ನಗಳು, ಬಿಡಿ ಭಾಗಗಳು, ಮಾಹಿತಿ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ ಉತ್ಪನ್ನಗಳು ಪ್ರದರ್ಶನದಲ್ಲಿರುತ್ತವೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...