ಬೆಂಗಳೂರು : ಕೋಳಿ ಕೇಳಿ ಮಸಾಲೆ ಅರಿಯೋಕೆ ಆಗಲ್ಲ, ಕಾಂಗ್ರೆಸ್ ಬರುವವರನ್ನು ತಡೆಯೋಕೆ ಆಗಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಪರೇಷನ್ ಹಸ್ತದ ಬಗ್ಗೆ ಡಿಸಿಎ ಪರೋಕ್ಷ ಸುಳಿವು ನೀಡಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ನಾವು ಯಾರನ್ನೂ ಕಾಂಗ್ರೆಸ್ ಗೆ ಬನ್ನಿ ಬನ್ನಿ ಎಂದು ಕರೆಯುತ್ತಿಲ್ಲ, ಬಿಜೆಪಿ ಬಿಟ್ಟು ಕಾಂಗ್ರೆಸ್ ಬರುವವರನ್ನು ತಡೆಯೋಕೆ ಆಗಲ್ಲ, ನಿಮ್ಮ ಅಧಿಕಾರಕ್ಕಾಗಿ ಅಂದು ನಮ್ಮ ಸರ್ಕಾರ ಬೀಳಿಸಿಲ್ವಾ..? ಕಾಂಗ್ರೆಸ್ ಗೆ ಬರುವವರನ್ನು ತಡೆಯೋಕೆ ಆಗುತ್ತಾ..? ಎಂದು ಸಿಟಿ ರವಿಗೆ ಟಾಂಗ್ ನೀಡಿದರು.
ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತದ ಬಗ್ಗೆ ಭಾರಿ ಚರ್ಚೆಗಳಾಗುತ್ತಿದ್ದು, ಕೆಲವು ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ವಿಚಾರ ರಾಜಕೀಯ ನಾಯಕರುಗಳ ಪರಸ್ಪರ ವಾಕ್ಸಮರಕ್ಕೂ ಕಾರಣವಾಗಿದೆ.
ಇನ್ನೂ. ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರು ಹರಿಸಿರುವ ಬೆನ್ನಲ್ಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರ್ವಪಕ್ಷ ಸಭೆ ಕರೆಯುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದರು. ಕಾವೇರಿ ನದಿ ವಿಚಾರ ಮಾತ್ರವಲ್ಲ ಮಹದಾಯಿ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆ ಕರೆಯುವ ಆಲೋಚನೆ ಸರ್ಕಾರಕ್ಕೂ ಇದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದರು. ಇದೀಗ ಸರ್ವಪಕ್ಷ ಸಭೆಗೆ ಸರ್ಕಾರ ಮುಹೂರ್ತ ನಿಗದಿ ಮಾಡಿದೆ. ಬುಧವಾರ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.ಕಾವೇರಿ, ಮಹದಾಯಿ, ಕೃಷ್ಣಾ ನದಿ ವಿವಾದ ಸೇರಿದಂತೆ ಹಲವು ವಿಚಾರವಾಗಿ ಸರ್ವಪಕ್ಷ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.