
ಜ್ಞಾನೇಂದ್ರ ಪ್ರತಾಪ್ ಸಿಂಗ್ ಅವರ ಪುತ್ರಿ ಐಶ್ವರ್ಯ ಸಿಂಗ್, ಸರ್ದಾರ್ ವಲ್ಲಭಬಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಿಂದ ಪದವಿ ಪೂರ್ಣಗೊಳಿಸಿ ಹೊರಬಂದಿದ್ದು ಪಾಸಿಂಗ್ ಔಟ್ ಕಾರ್ಯಕ್ರಮದಲ್ಲಿ ಈ ಅಪರೂಪದ ಘಟನೆ ನಡೆದಿದೆ.
ಇದರ ಫೋಟೋವನ್ನು ಟ್ವೀಟ್ ಮಾಡಿರುವ ಜ್ಞಾನೇಂದ್ರ ಪ್ರತಾಪ್ ಸಿಂಗ್ ‘ನನಗೆ ಪದಗಳೇ ಸಾಲುತ್ತಿಲ್ಲ’ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ತಮ್ಮ ಪುತ್ರಿಯ ಸಾಧನೆಗೆ ಮನದುಂಬಿ ಹಾರೈಸಿದ್ದಾರೆ. ಈ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.