
ಗುವಾಹಟಿ: ಅಸ್ಸಾಂ ಮಾಜಿ ಗೃಹ ಸಚಿವರ ಪುತ್ರಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ.
ಮಾಜಿ ಗೃಹ ಸಚಿವ ದಿ.ಭಾರಿಗು ಕುಮಾರ್ ಫುಕನ್ ಅವರ ಮಗಳು ಉಪಾಸನಾ ಫುಕನ್ (28) ಆತ್ಮಹತ್ಯೆಗೆ ಶರಣಾದವರು. ಮನೆಯ ಎರಡನೇ ಮಹಡಿಯಿಂದ ಜಿಗಿದು ಉಪಾಸನಾ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಗಂಭೀರ ಸ್ಥಿತಿಯಲ್ಲಿದ್ದ ಉಪಾಸನಾ ಅವರನ್ನು ತಕ್ಷಣ ಗುವಾಹಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ.
ಉಪಾಸನಾ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಾಥಮಿಕ ತನಿಖೆ ಪ್ರಕಾರ ಅವರು ದೀರ್ಘ ಕಾಲದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆಯನ್ನೂ ಪಡೆಯುತ್ತಿದ್ದರು. ಈ ಹಿಂದೆಯೂ ಅವರು ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.