ಅಸ್ಸಾಂ: ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಲು ರೀಲ್ಸ್ ಮಾಡಿದ್ದಕ್ಕಾಗಿ ಅಸ್ಸಾಂನ ಸರ್ಕಾರಿ ಶಾಲೆಯ ನಾಲ್ವರು ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಲಾಗಿದೆ.
ಎಲ್ಲ ವಿದ್ಯಾರ್ಥಿಗಳು 8ನೇ ತರಗತಿಯಲ್ಲಿ ಓದುತ್ತಿದ್ದರು. ಲಾಟು ಮಾಡೆಲ್ ಹೈಯರ್ ಸೆಕೆಂಡರಿ ಶಾಲೆಯ ಶಾಲಾ ಸಮವಸ್ತ್ರದಲ್ಲಿ ನಾಲ್ವರು ವಿದ್ಯಾರ್ಥಿಗಳು ಜನಪ್ರಿಯ ಹಿಂದಿ ಐಟಂ ಸಾಂಗ್ಗೆ ನೃತ್ಯ ಮಾಡುತ್ತಿರುವ ರೀಲ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಈ ಕ್ರಮ ತೆಗೆದುಕೊಳ್ಳಲಾಗಿದೆ.
ಶಾಲೆಯ ಪ್ರಾಂಶುಪಾಲರಾದ ಬಿಸ್ವಜ್ಯೋತಿ ಡೇ ಅವರು ಈ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸಿದ್ದಾರೆ. ಇದಲ್ಲದೆ, ಸಮಿತಿಯು ವಿಚಾರಣೆಯನ್ನು ಪೂರ್ಣಗೊಳಿಸಿ ತನ್ನ ವರದಿಯನ್ನು ಸಲ್ಲಿಸುವವರೆಗೆ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗುತ್ತದೆ ಎಂದಿದ್ದಾರೆ.
ಇದಕ್ಕೂ ಮೊದಲು ಡಿಸೆಂಬರ್ 16 ರಂದು ಕರೀಮ್ಗಂಜ್ ಜಿಲ್ಲೆಯಲ್ಲಿ ತರಗತಿಯೊಂದರೊಳಗೆ ವಿಡಿಯೋ ಮಾಡಿದ್ದ ಎಂಟು ವಿದ್ಯಾರ್ಥಿಗಳನ್ನು ಹೊರಹಾಕಲಾಗಿತ್ತು.