
ಬೆಂಗಳೂರು: ಅಸ್ಸಾಂ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಅಂಕಿತಾ ದತ್ತಾ ಅವರಿಗೆ ಕಿರುಕುಳ ಮತ್ತು ಲಿಂಗ ತಾರತಮ್ಯ ಪ್ರಕರಣ ಆರೋಪಿಯಾಗಿರುವ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಅವರಿಗೆ ಅಸ್ಸಾಂ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.
ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಅಸ್ಸಾಂ ಪೊಲೀಸರು ವಿಚಾರಣೆಗೆ ಮೂರು ಬಾರಿ ನೋಟಿಸ್ ನೀಡಿದ್ದು, ಇದುವರೆಗೂ ವಿಚಾರಣೆಗೆ ಹಾಜರಾಗಿಲ್ಲ. ಅಸ್ಸಾಂ ಪೊಲೀಸರ ತಂಡ ಬೆಂಗಳೂರಿಗೆ ಆಗಮಿಸಿ ಬಸವೇಶ್ವರನಗರದಲ್ಲಿರುವ ಶ್ರೀನಿವಾಸ್ ಅವರ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ. ಅವರಿಗಾಗಿ ಹುಡುಕಾಟ ನಡೆಸಲಾಗಿದೆ.