ಅಸ್ಸಾಂ ರಾಜ್ಯಸಭಾ ಚುನಾವಣೆಯಲ್ಲಿ 5 ಶಾಸಕರ ಮತಗಳನ್ನು ಅಮಾನ್ಯಗೊಳಿಸಬೇಕೆಂದು ಕಾಂಗ್ರೆಸ್ ಬೇಡಿಕೆ ಇಟ್ಟಿದ್ದು, ಇದನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ.
5 ಮಂದಿ ಶಾಸಕರು ತಮ್ಮ ಬ್ಯಾಲೆಟ್ ಪೇಪರ್ ಅನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ. 5 ಎನ್.ಡಿ.ಎ. ಶಾಸಕರ ಮತಗಳನ್ನು ಅಮಾನ್ಯಗೊಳಿಸುವಂತೆ ಕಾಂಗ್ರೆಸ್ ಪಕ್ಷದ ನಾಯಕರು ಆಗ್ರಹಿಸಿದ್ದು, ಈ ಬೇಡಿಕೆಯನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ. ಕಾಂಗ್ರೆಸ್ ಪಕ್ಷದ ದೂರನ್ನು ಚುನಾವಣಾ ಆಯೋಗ ತಿರಸ್ಕರಿಸುವುದರೊಂದಿಗೆ ಬಿಜೆಪಿ ಎರಡೂ ಸ್ಥಾನಗಳನ್ನು ಗೆಲ್ಲಲಿದ್ದು, ಅಧಿಕೃತ ಘೋಷಣೆ ಬಾಕಿ ಇದೆ.