
ಗುವಾಹಟಿ: ಅಸ್ಸಾಂನ ಕರೀಂಗಂಜ್ ಪ್ರದೇಶದಲ್ಲಿ ಆರು ಹದಿಹರೆಯದ ಹುಡುಗರು 13 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ನಡೆದಿದೆ.
ಎಲ್ಲಾ ಆರೋಪಿಗಳು 13 ರಿಂದ 15 ವರ್ಷ ವಯಸ್ಸಿನವರಾಗಿದ್ದು, ಚಹಾ ತೋಟದ ಕಾರ್ಮಿಕರ ಕುಟುಂಬಕ್ಕೆ ಸೇರಿದವರಾಗಿದ್ದಾರೆ.
ಅತ್ಯಾಚಾರ ಸಂತ್ರಸ್ತೆಯ ಕುಟುಂಬವು ನ. 7 ರಂದು ಪೊಲೀಸರಿಗೆ ದೂರು ನೀಡಿದೆ. ರಾಮಕೃಷ್ಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಾಳಿನಗರ ಪ್ರದೇಶದಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.
ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿ ಎಲ್ಲಾ ಆರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳಲ್ಲಿ ಒಬ್ಬನು ತನ್ನ ಮೊಬೈಲ್ ಫೋನ್ ನಲ್ಲಿ ಸಾಮೂಹಿಕ ಅತ್ಯಾಚಾರದ ಘಟನೆಯನ್ನು ರೆಕಾರ್ಡ್ ಮಾಡಿದ್ದಾನೆ ಮತ್ತು ಕ್ಲಿಪ್ ಅನ್ನು ಇತರರೊಂದಿಗೆ ಹಂಚಿಕೊಂಡಿದ್ದಾನೆ. ಪೊಲೀಸರು ಫೋನ್ ವಶಪಡಿಸಿಕೊಂಡಿದ್ದಾರೆ.
ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ(ಪೋಕ್ಸೊ) ಅಡಿಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ.