alex Certify ವಿಧಾನಸಭಾ ಕ್ಷೇತ್ರವಾರು ಮತದಾರರ ಕರಡು ಯಾದಿ ಪ್ರಕಟ : ಆಕ್ಷೇಪಣೆ ಸಲ್ಲಿಸಲು ನ. 28 ಕೊನೆಯ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನಸಭಾ ಕ್ಷೇತ್ರವಾರು ಮತದಾರರ ಕರಡು ಯಾದಿ ಪ್ರಕಟ : ಆಕ್ಷೇಪಣೆ ಸಲ್ಲಿಸಲು ನ. 28 ಕೊನೆಯ ದಿನ

ಧಾರವಾಡ : ಜಿಲ್ಲೆಯ ಎಲ್ಲ ವಿಧಾನಸಭಾ ಮತಕ್ಷೇತ್ರಗಳ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ನಡೆದಿದ್ದು, ಜಿಲ್ಲಾ ಚುನಾವಣಾ ಅಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ನಿನ್ನೆ (ಅ.29) ಮತದಾರರ ಕರಡು ಯಾದಿಯನ್ನು ಪ್ರಕಟಿಸಿದ್ದಾರೆ.

ಅವರು, ನಿನ್ನೆ (ಅ.29) ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ಜರುಗಿಸಿ, ಮತದಾರರ ಕರಡು ಯಾದಿಯನ್ನು ವಿತರಿಸಿ ಮಾತನಾಡಿದರು.
ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ದಿ: 01-01-2025 ರನ್ನು ಅರ್ಹ ದಿನಾಂಕವೆಂದು ಪರಿಗಣಿಸಿ ವಿಧಾನಸಭಾ ಕ್ಷೇತ್ರಗಳ ಮತದಾರರ ಯಾದಿಗಳನ್ನು ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಕೈಗೊಳ್ಳುವ ಬಗ್ಗೆ ಭಾರತ ಚುನಾವಣಾ ಆಯೋಗವು ವೇಳಾ ಪಟ್ಟಿಯನ್ನು ಹೊರಡಿಸಿದೆ.

ಅದರಂತೆ ಧಾರವಾಡ ಜಿಲ್ಲೆ ವಿಧಾನಸಭಾ ಕ್ಷೇತ್ರಗಳಾದ 72-ಹುಬ್ಬಳ್ಳಿ-ಧಾರವಾಡ ಪೂರ್ವ, 73- ಹುಬ್ಬಳ್ಳಿ ಧಾರವಾಡ ಕೇಂದ್ರ , 74- ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರಗಳ ಮತದಾರರ ಕರಡು ಯಾದಿಯನ್ನು ಮತದಾರರ ನೋಂದಣಾಧಿಕಾರಿಗಳು ಆಗಿರುವ ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತರ ಕಚೇರಿ ಮತ್ತು ಸಹಾಯಕ ಮತದಾರರ ನೋಂದಣಾಧಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ.
ಮತ್ತು 69- ನವಲಗುಂದ, 70-ಕುಂದಗೋಳ, 71- ಧಾರವಾಡ, 75- ಕಲಘಟಗಿ ವಿಧಾನಸಭಾ ಮತಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮತದಾರರ ಕರಡು ಯಾದಿಗಳನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ತಹಶೀಲ್ದಾರರ ಕಚೇರಿಗಳಲ್ಲಿ ಮತ್ತು ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮತ್ತು ಮುಖ್ಯ ಚುನಾವಣಾಧಿಕಾರಿಗಳ ವೆಬ್ಸೈಟ್ www.ceokarnataka.kar.nic.in ದ್ದರಲ್ಲಿ ದಿ: 29.10.2024 ರಂದು ಪ್ರಕಟಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದರು.

ಆಯಾ ವಿಧಾನಸಭಾ ಮತಕ್ಷೇತ್ರದ ನಿಗದಿಪಡಿಸಿದ ಮತಗಟ್ಟೆಗಳಲ್ಲಿ, ಕಚೇರಿ ವೇಳೆಯಲ್ಲಿ ಅಕ್ಟೊಬರ 29 ರಿಂದ ನವೆಂಬರ್ 28 ರ ವರೆಗೆ ಮತದಾರರ ಪರಿಶೀಲನೆಗಾಗಿ ಲಭ್ಯವಿರುತ್ತದೆ. ಈ ಅವಧಿಯಲ್ಲಿ ( ಅ.29 ರಿಂದ ನ.28) ಮತದಾರರು ಮತದಾರರ ಯಾದಿ ಪರಿಶೀಲಿಸಿ, ಮತದಾರಪಟ್ಟಿಗೆ ಹಕ್ಕು ಮತ್ತು ಆಕ್ಷಪಣೆ ಸಲ್ಲಿಸಲು ಅವಕಾಶವಿರುತ್ತದೆ ಎಂದು ಅವರು ಹೇಳಿದರು.

ಹೊಸದಾಗಿ ಹೆಸರು ಸೆರ್ಪಡೆಗೆ ಅರ್ಜಿ ನಮೂನೆ 6:
ದಿನಾಂಕ: 01-01-2025 ಕ್ಕೆ ಇರುವಂತೆ 18 ವರ್ಷ ವಯಸ್ಸು ಪೂರ್ಣಗೊಂಡಿರುವವರು, ಮತದಾರರ ಯಾದಿಗಳಲ್ಲಿ ಹೆಸರು ಇಲ್ಲದವರು ಈ ಅವಧಿಯಲ್ಲಿ ತಮ್ಮ ಹೆಸರುಗಳನ್ನು ನಮೂನೆ ನಂ. 6 ರಲ್ಲಿ ಸಲ್ಲಿಸಬಹುದು. ಹಾಗೂ 2025 ನೇ ವರ್ಷದ ಅರ್ಹತಾ ದಿನಾಂಕಗಳಾದ 1 ನೇ ಏಪ್ರಿಲ್, 2025, 1ನೇ ಜುಲೈ, 2025 ಅಥವಾ ಅಕ್ಟೋಬರ್, 2025 ನೇದ್ದಕ್ಕೆ 18 ವರ್ಷ ವಯಸ್ಸು ಪೂರ್ಣಗೊಳ್ಳುವವರು, ಕರಡು ಮತದಾರ ಪಟ್ಟಿ ಪ್ರಕಟಣೆ ದಿನಾಂಕದಿಂದ ನಮೂನೆ 6 ರಲ್ಲಿ ಸೇರ್ಪಡೆಗೊಳಿಸಲು ಅರ್ಜಿ ಸಲ್ಲಿಸಬಹುದಾಗಿದೆ. ಇಂತಹ ಅರ್ಜಿಗಳನ್ನು ಆಯಾ ತ್ರೈಮಾಸಿಕಗಳಲ್ಲಿ ಅರ್ಹತೆಯನ್ನು ಪರಿಶೀಲಿಸಿ ನಿಯಮಾನುಸಾರ ನೋಂದಣಿ ಮಾಡಿಕೊಳ್ಳಲಾಗುವುದು. ಮತದಾರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ ಮಾಡಲು ನಮೂನೆ 6 ರಲ್ಲಿ ಅರ್ಜಿ ಸಲ್ಲಿಸುವ ಅರ್ಜಿದಾರನು ಅರ್ಜಿಗೆ ಇತ್ತೀಚಿನ ಪಾಸ್ಪೋರ್ಟ ಸೈಜ್ ಫೋಟೋ ಹಾಗೂ ವಿಳಾಸದ ಬಗ್ಗೆ ದಾಖಲೆಗಳು ಹಾಗೂ ವಯಸ್ಸಿನ ಬಗ್ಗೆ ದಾಖಲೆಗಳನ್ನು ಸಲ್ಲಿಸಬೇಕು.

ಹೆಸರು ತೆಗೆದು ಹಾಕಲು ಅರ್ಜಿ ನಮೂನೆ 7

ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದು ಹಾಕುವ ಸಲುವಾಗಿ ನಮೂನೆ 7 ರಲ್ಲಿ ಅರ್ಜಿ ಸಲ್ಲಿಸುವುದು.
ಅರ್ಜಿ ನಮೂನೆ 8:

ಮತದಾರರ ನಿವಾಸ ಬದಲಾವಣೆಯಿದ್ದಲ್ಲಿ (ಮತದಾರ ಪಟ್ಟಿಯ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಸ್ಥಳಾಂತರವಾಗಿದ್ದಲ್ಲಿ), ಪ್ರಸ್ತುತ ಮತದಾರರ ಪಟ್ಟಿಯಲ್ಲಿರುವ ನಮೂದುಗಳ ಸರಿಪಡಿಸಬೇಕಾಗಿದ್ದಲ್ಲಿ, ಯಾವುದೇ ತಿದ್ದುಪಡಿಗಳಿಲ್ಲದೆ ಬದಲಿ ಮತದಾರರ ಗುರುತಿನ ಚೀಟಿ (ಎಪಿಕ್) ಅವಶ್ಯಕತೆ ಇದ್ದಲ್ಲಿ, ನಮೂನೆ 8 ರಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹಕ್ಕು, ಆಕ್ಷೆಪಣೆ ಸಲ್ಲಿಸಲು ನ.28 ರ ವರೆಗೆ ಅವಕಾಶ

ಕರಡು ಮತದಾರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ವಿಎಚ್ಎ ಮೊಬೈಲ್ ಆ್ಯಪ್ ಮುಖಾಂತರ ಅಥವಾ www.voters.eci.gov.in ರ ಮುಖಾಂತರ ಅಥವಾ ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳು, ಉಪವಿಭಾಗಾಧಿಕಾರಿಗಳ ಕಾರ್ಯಾಲಯ, ಸಂಬಂಧಪಟ್ಟ ತಹಶೀಲ್ದಾರರ ಕಾರ್ಯಾಲಯಗಳಲ್ಲಿ ನವೆಂಬರ್ 28, 2024 ರವರೆಗೆ ಸ್ವೀಕರಿಸಲಾಗುವುದು.
ನಿಗದಿತ ಕೊನೆ ದಿನಾಂಕದವರೆಗೆ ಸ್ವೀಕೃತವಾಗುವ ಹಕ್ಕು ಮತ್ತು ಆಕ್ಷೇಪಣೆಗಳನ್ನು ನಿಯಮಾನುಸಾರ ವಿಲೇವಾರಿ ಮಾಡಿ ಚುನಾವಣಾ ಆಯೋಗದ ನಿರ್ದೇಶನದಂತೆ ಅಂತಿಮ ಮತದಾರರ ಪಟ್ಟಿಯನ್ನು ದಿನಾಂಕ: 06.01.2025 ರಂದು ಪ್ರಕಟಿಸಲಾಗುವದೆಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...