
ಬೆಂಗಳೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಮ್ಯಾಜಿಕ್ ನಂಬರ್ 113 ತಲುಪಲು ಪೈಪೋಟಿ ಶುರುವಾಗಿದೆ.
ಮತ ಎಣಿಕೆ ಆರಂಭವಾಗುತ್ತಿದ್ದಂತೆ ಜೆಡಿಎಸ್ 15, ಬಿಜೆಪಿ 62, ಕಾಂಗ್ರೆಸ್ 53 ಕ್ಷೇತ್ರಗಳಲ್ಲಿ ಹಾಗೂ ಇತರರು ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಚಾಮರಾಜಪೇಟೆಯಲ್ಲಿ ಜಮೀರ್ ಅಹ್ಮದ್, ಮಾಗಡಿಯಲ್ಲಿ ಬಾಲಕೃಷ್ಣ, ಕಾರ್ಕಳದಲ್ಲಿ ಸುನಿಲ್ ಕುಮಾರ್, ಶಿರಾದಲ್ಲಿ ಟಿ.ಬಿ. ಜಯಚಂದ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮಾಲೂರಿನಲ್ಲಿ ಪಕ್ಷೇತರ ಅಭ್ಯರ್ಥಿ ಮುನ್ನಡೆ ಗಳಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ್ ಮುನ್ನಡೆ ಗಳಿಸಿದ್ದಾರೆ.