alex Certify 20,000 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹ್ಮದ್ ಮುನ್ನಡೆ: ಕಾಂಗ್ರೆಸ್ 103 ಕ್ಷೇತ್ರಗಳಲ್ಲಿ ಲೀಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

20,000 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹ್ಮದ್ ಮುನ್ನಡೆ: ಕಾಂಗ್ರೆಸ್ 103 ಕ್ಷೇತ್ರಗಳಲ್ಲಿ ಲೀಡ್

ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹ್ಮದ್ ಖಾನ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅವರು 20,000 ಮತಗಳ ಅಂತರದಿಂದ ಮುನ್ನಡೆ ಗಳಿಸಿದ್ದಾರೆ.

ಚಾಮರಾಜನಗರ ಕ್ಷೇತ್ರದಲ್ಲಿ ಸಚಿವ ವಿ. ಸೋಮಣ್ಣ ಅವರಿಗೆ ಭಾರಿ ಹಿನ್ನಡೆಯಾಗಿದೆ 9 ಸಾವಿರ ಮತಗಳ ಅಂತರದಿಂದ ಹಿನ್ನಡೆ ಗಳಿಸಿದ್ದಾರೆ. ಬಬಲೇಶ್ವರದಲ್ಲಿ ಎಂ.ಬಿ. ಪಾಟೀಲ 2400 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಕಾಂಗ್ರೆಸ್ 103, ಬಿಜೆಪಿ 78, ಜೆಡಿಎಸ್ 34, ಇತರರು 5 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ.

ಚನ್ನಗಿರಿಯಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿಯ ಎಂಟಿಬಿ ನಾಗರಾಜ್ ಗೆ ಹಿನ್ನಡೆಯಾಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಲಕ್ಷ್ಮಿ ಹೆಬ್ಬಾಳ್ಕರ್ ಮುನ್ನಡೆ ಕಾಯ್ದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...