alex Certify BREAKING NEWS: ಮ್ಯಾಜಿಕ್ ನಂಬರ್ ದಾಟಿದ ಕಾಂಗ್ರೆಸ್; ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆ; ಕಾರ್ಯಕರ್ತರ ಸಂಭ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮ್ಯಾಜಿಕ್ ನಂಬರ್ ದಾಟಿದ ಕಾಂಗ್ರೆಸ್; ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆ; ಕಾರ್ಯಕರ್ತರ ಸಂಭ್ರಮ

ಬೆಂಗಳೂರು: ವಿಧಾನಸಭೆ ಚುನಾವಣೆ ಮತ ಎಣಿಕೆ ಮುಂದುವರೆದಿದ್ದು, ಆರಂಭಿಕ ಸುತ್ತಿಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು 114 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ.

ಮ್ಯಾಜಿಕ್ ನಂಬರ್ ದಾಟಿದ ಕಾಂಗ್ರೆಸ್ 114 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 224 ಕ್ಷೇತ್ರಗಳಲ್ಲಿ ಮ್ಯಾಜಿಕ್ ನಂಬರ್ 113 ಸ್ಥಾನಗಳು ಬೇಕಿದ್ದು, ಕಾಂಗ್ರೆಸ್ 114 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಬಿಜೆಪಿ 76, ಜೆಡಿಎಸ್ 28, ಕ್ಷೇತ್ರಗಳಲ್ಲಿ ಹಾಗೂ ಇತರರು 6 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಲಕ್ಷಣಗಳಿವೆ.

ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಮನೆ ಮಾಡಿದೆ. ಪಕ್ಷದ ಬಾವುಟದೊಂದಿಗೆ ಘೋಷಣೆ ಕೂಗಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...